
ಬೆಂಗಳೂರು: ರಾಜ್ಯ ಸರ್ಕಾರವು ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಅಳವಡಿಕೆಗೆ ನೀಡಿದ್ದ ಗಡುವು ಸೆ.15ಕ್ಕೆ ಮುಕ್ತಾಯಗೊಳ್ಳಲಿದ್ದು, ಸೆ.16 ರಿಂದ ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಸೋಮವಾರದಿಂದ ಸಾರಿಗೆ ಅಧಿಕಾರಿಗಳು HSRP ಇಲ್ಲದಿದ್ರೆ ದಂಡ ವಿಧಿಸಲಿದ್ದು ಇದುವರೆಗೂ 4 ಬಾರಿ ಗಡುವು ವಿಸ್ತರಿಸಿದರೂ ವಾಹನ ಸವಾರರ ನಿರಾಸಕ್ತಿ ತೋರುತ್ತಿರುವುದರಿಂದ ನಾಲ್ಕನೇ ಬಾರಿ ಗಡುವು ವಿಸ್ತರಿಸುವ ಸಾಧ್ಯತೆ ಕಡಿಮೆಯಿದೆ. ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಸಬೇಕಿತ್ತು. ಆದರೆ ಕೇವಲ 52 ಲಕ್ಷ ವಾಹನಗಳಿಗೆ ಮಾತ್ರ ಅಳವಡಿಸಲಾಗಿದೆ. ಇನ್ನೂ 1.48 ಕೋಟಿ ವಾಹನಗಳಿಗೆ ಹೆಚ್‌ಎಸ್ಆರ್‌ಪಿ ಅಳವಡಿಕೆ ಬಾಕಿಯಿದೆ.
ಹೀಗಾಗಿ ಮೊದಲ ಬಾರಿಗೆ 500 ದಂಡ, ಎರಡನೇ ಬಾರಿ 1000 ರೂ ದಂಡ ಮತ್ತು ಮೂರನೇ ಬಾರಿ ಸಿಕ್ಕಾಕಿಕೊಂಡರೆ ಅಂತಹ ವಾಹನ ಜಪ್ತಿ ಮಾಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.
HSRP ನಂಬರ್ ಪ್ಲೇಟ್ ಬುಕ್ ಮಾಡಲು ಅನುಸರಿಸಬೇಕಾದ ವಿಧಾನ:
https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಿ Book HSRP ಕ್ಲಿಕ್ ಮಾಡಬೇಕು.
ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಂಡು ವಾಹನದ ಮಾಹಿತಿಯನ್ನು ನಮೂದಿಸಿಕೊಳ್ಳಬೇಕು.
ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿಕೊಂಡು HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಬೇಕು.
ಮೊಬೈಲ್ ನಂಬರ್‌ಗೆ ಬರವು ಒಟಿಪಿಯನ್ನು ನಮೂದಿಸಿ
HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿ ಕೊಳ್ಳಬೇಕು.













