
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿಗೆ ಸಿಡಬ್ಲ್ಯೂಸಿ ಸದಸ್ಯರು ಸರ್ವಾನುಮತದಿಂದ ವಿನಂತಿಸಿಕೊಂಡಿದ್ದು, ರಾಹುಲ್ ಗಾಂಧಿಯವರ ಒಪ್ಪಿಗೆಯ ಮೇರೆಗೆ ನಿರ್ಣಯ ಅಂತಿಮಗೊಳ್ಳಲಿದೆ ಎಂದು ಪಕ್ಷದ ಹಿರಿಯ ನಾಯಕ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಸಂಸತ್ತಿನ ಒಳಗೆ ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ ಸರಿಯಾದ ವ್ಯಕ್ತಿ ಎಂದು ಸುದ್ದಿಗೋಷ್ಠಿಯಲ್ಲಿ ನಿರ್ಧರಿಸಲಾಗಿದೆ. ರಾಹುಲ್ ಗಾಂಧಿಯವರ ಕಾರಣದಿಂದಲೇ ಪಕ್ಷಕ್ಕೆ ಹೆಚ್ಚು ಸ್ಥಾನ ಬಂದಿದೆ. ಮಣಿಪುರದಲ್ಲೂ ಪಕ್ಷಕ್ಕೆ ಎರಡು ಸ್ಥಾನ ಬರಲು ಕಾರಣ ರಾಹುಲ್ ಗಾಂಧಿ ನಮ್ಮ ನಾಯಕರು ಮತ್ತು ಕಾರ್ಯಕರ್ತರು ಹುಮ್ಮಸ್ಸಿನಿಂದ ಪಕ್ಷದ ಕೆಲಸಗಳನ್ನು ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.