27.3 C
Udupi
Thursday, December 12, 2024
spot_img
spot_img
HomeBlogವಿವಾಹಿತ ಮಹಿಳೆಯರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಸುಪ್ರೀಂ ಕೋರ್ಟ್

ವಿವಾಹಿತ ಮಹಿಳೆಯರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಸುಪ್ರೀಂ ಕೋರ್ಟ್

ನವದೆಹಲಿ: 34 ವರ್ಷದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್‌ಗೆ ನ್ಯಾಯಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಗಳ ಮಧ್ಯೆ ಸುಪ್ರೀಂ ಕೋರ್ಟ್ ವಿವಾಹಿತ ಮಹಿಳೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ಕಾನೂನನ್ನು ವ್ಯಾಪಕವಾಗಿ ಬಳಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಹಣ ವಸೂಲಿ ಮಾಡಲು ತನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದ ಅತುಲ್ ಸುಭಾಷ್ ಪತ್ನಿ ಮತ್ತು ಆಕೆಯ ಕುಟುಂಬದ ಕಿರುಕುಳವನ್ನು ಸೂಸೈಡ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಹಿಳೆಯರನ್ನು ತಮ್ಮ ಕುಟುಂಬದ ಕ್ರೌರ್ಯದಿಂದ ರಕ್ಷಿಸುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿದ್ದು ಅಮಾಯಕರ ಮೇಲೆ ಅನಗತ್ಯ ಕಿರುಕುಳವನ್ನು ತಡೆಯಲು ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ನಿರ್ಧರಿಸುವಾಗ ನ್ಯಾಯಾಲಯಗಳು ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅತುಲ್ ಸುಭಾಷ್ ಅವರು ಆತ್ಮಹತ್ಯೆಗೆ ಮುನ್ನ, 80 ನಿಮಿಷಗಳ ವೀಡಿಯೊ ಹಾಗೂ 24 ಪುಟಗಳ ಸುಧೀರ್ಘ ಡೆತ್ ನೋಟ್ ಬರೆದಿದ್ದು ಅದರಲ್ಲಿ ಅವರು ತಮ್ಮ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಅವರ ಕುಟುಂಬ ಹಣವನ್ನು ಸುಲಿಗೆ ಮಾಡಲು ತನ್ನ ಮತ್ತು ತನ್ನ ಕುಟುಂಬದ ಮೇಲೆ ಅನೇಕ ಪ್ರಕರಣಗಳನ್ನು ಹಾಕಿದ್ದಾರೆ ಎಂದು ಆರೋಪಿಸಿದ್ದರು. ಇದಲ್ಲದೆ ಅತುಲ್ ತಮ್ಮ ಆತ್ಮಹತ್ಯೆ ಪತ್ರದಲ್ಲಿ ನ್ಯಾಯ ವ್ಯವಸ್ಥೆಯನ್ನೂ ಟೀಕಿಸಿದ್ದರು

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page