
ಜೈಪುರ: ಐಪಿಎಲ್ ಟೂರ್ನಿಯಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು ನಟ ಕಿಚ್ಚ ಸುದೀಪ್ ಅವರಿಗೆ ರಾಜಸ್ಥಾನ್ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.
ಕಡುನೀಲಿ ಮತ್ತು ತಿಳಿಗೆಂಪು (ಪಿಂಕ್) ಮಿಶ್ರಿತ ಬಣ್ಣದ ಜೆರ್ಸಿ ಇದಾಗಿದ್ದು ಜೆರ್ಸಿ ಹಿಂಭಾಗದಲ್ಲಿ ಸುದೀಪ್ ಎಂದು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಈ ಜೆರ್ಸಿ ಫೋಟೋವನ್ನು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕಿಚ್ಚ ಸುದೀಪ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.