21.3 C
Udupi
Saturday, February 14, 2026
spot_img
spot_img
HomeBlogವಿಶ್ವ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ವಿಧಿವಶ, ಕಾಂಗ್ರೆಸ್ ತೀವ್ರ ಸಂತಾಪ

ವಿಶ್ವ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ವಿಧಿವಶ, ಕಾಂಗ್ರೆಸ್ ತೀವ್ರ ಸಂತಾಪ

spot_imgspot_img

ದೇಶದ ಜನ ಅವರನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ,ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ರಾಹುಲ್ ಗಾಂಧಿ ಕಂಬನಿ.

ವಿಶ್ವಾ ಶ್ರೇಷ್ಠ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿದ್ದು , ಸಿಎಂ ಸಿದ್ದರಾಮಯ್ಯ, ಡಿಸಿಎಂ, ಎಚ್‌ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸೇರಿದಂತೆ ವಿಪಕ್ಷ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರ ನಿಧನದ ಹಿನ್ನೆಲೆ ಇಂದು ಶುಕ್ರವಾರ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

“ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದ್ದರು ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ರಾಷ್ಟ್ರವನ್ನು ಪ್ರೇರೇಪಿಸಿತು. ನಾನು ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ದೇಶದ ಜನ ಅವರನ್ನು ಅತ್ಯಂತ ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ ಅವರ ಪತ್ನಿ ಮತ್ತು ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಂಬನಿ ಮಿಡಿದಿದ್ದಾರೆ. ಇವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಬೆಳಗಾವಿಗೆ ಆಗಮಿಸಿದ್ದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page