
ಬೆಂಗಳೂರು: ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡೋ ವಿಚಾರಕ್ಕೆ ನಾವೇನು ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ ಎಂದು ಹೇಳಿಕೆ ನೀಡಿದಾಗ ಯಡಿಯೂರಪ್ಪ ಮಾತಿಗೆ ಕಾಂಗ್ರೆಸ್ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಆದರೆ ಇದೀಗ ಸರ್ಕಾರವೇ ಹಣ ಕೊಡೋಕೆ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಯಡಿಯೂರಪ್ಪ ಅವರು ವಿಧಾನ ಪರಿಷತ್‌ನಲ್ಲಿ ಹೀಗೆ ಮಾತನಾಡಿದ್ದರು ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದರು. ಯಡಿಯೂರಪ್ಪ ಅವರ ಹೇಳಿಕೆಯನ್ನು ಅನೇಕ ಬಾರಿ ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪ ಮಾಡಿದ್ದು ಆದರೆ ಇದೀಗ ಅದೇ ಮಾತನ್ನು ಸಚಿವ ರಾಜಣ್ಣ ಅವರು ಸಹ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.