
ಕಾರ್ಕಳ : ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮ ಗೋಸಾಗಾಟ, ಕಳ್ಳತನ, ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಮತ್ತು ತಾಲೂಕಿನಾದ್ಯಂತ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಕಾರ್ಕಳ ಠಾಣಾ ವೃತ್ತ ನಿರೀಕ್ಷಕರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಪ್ರಾಂತ ಧರ್ಮಪ್ರಸಾರ ಪ್ರಚಾರ ಪ್ರಮುಖರಾದ ಸುನಿಲ್ ಕೆ.ಆರ್. ಮತ್ತು ತಾಲೂಕಿನ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.