
ಸಾಮಾಜಿಕ ಕಾರ್ಯಕರ್ತ, ಲೇಖಕ, ಶಿಕ್ಷಕ ಉಡುಪಿಯ ವಿಷ್ಣುಪ್ರಸಾದ್ ಕೊಡಿಬೆಟ್ಟು ಇವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ “ಕನ್ನಡ ಪಯಸ್ವಿನಿ” ಸಾಧಕ ಪ್ರಶಸ್ತಿ
ಕಾಸರಗೋಡು:
ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆಯು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್ ಅರಸ್” ವೇದಿಕೆಯಲ್ಲಿ 22.02.2026.ರಂದು ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಸರ್ವಾಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಡುಪಿಯ ಯುವ ಲೇಖಕ, ಸಾಮಾಜಿಕ ಕಾರ್ಯಕರ್ತರಾದ ವಿಷ್ಣುಪ್ರಸಾದ್ ಕೊಡಿಬೆಟ್ಟು ಇವರಿಗೆ “ಕನ್ನಡ ಪಯಸ್ವಿನಿ” ಅಂತಾರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕನ್ನಡ ಭವನ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್, ಗೌರವ ಅಧ್ಯಕ್ಷರಾದ ಪ್ರದೀಪ್ ಬೇಕಲ್, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವೆಂಕಟ್ರಮಣ ಹೊಳ್ಳ, ಕಾರ್ಯದರ್ಶಿ ವಸಂತ ಕೆರೆಮನೆ, ಸಂಧ್ಯಾರಾಣಿ ಬೇಕಲ್ ಮುಂತಾದವರು ಉಪಸ್ಥಿತರಿದ್ದರು. ಇವರು ಕೊಡಿಬೆಟ್ಟಿನ ದಿ. ದೇವದಾಸ ನಾಯಕ್ ಹಾಗೂ ಶಾಂತಾ ನಾಯಕ್ ಇವರ ಪುತ್ರ.






