
ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಧವಿ ಲತಾ ಅವರು ಸೋಮವಾರ ಮತದಾನ ಕೇಂದ್ರದಲ್ಲಿ ಮುಸ್ಲಿಂ ಮಹಿಳೆಯರ ಬಳಿ ಹೋಗಿ ವೋಟರ್ ಐಡಿ ತೋರಿಸಿ ಬುರ್ಖಾ ತೆಗೆಯುವಂತೆ ಹೇಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಾಧವಿ ಲತಾ ಅವರು ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ಪರಿಶೀಲನೆಗಾಗಿ ತಮ್ಮ ಬುರ್ಖಾ ತೆಗೆಯುವಂತೆ ಹೇಳುತ್ತಿರುವುದನ್ನು ಕಾಣಬಹುದಾಗಿದ. ಅಲ್ಲದೇ ನೀವು ಎಷ್ಟು ವರ್ಷಗಳ ಹಿಂದೆ ಇದನ್ನು ಮಾಡಿದ್ದೀರಿ ಎಂದು ಇದೇ ವೇಳೆ ಮುಸ್ಲಿಂ ಮಹಿಳೆಯರನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಹೆಚ್ಚಿನ ಪರಿಶೀಲನೆಗಾಗಿ ಆಧಾರ್ ಕಾರ್ಡ್ ಕೂಡ ಕೊಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮಾಧವಿ ಲತಾ,ನಾನು ಒಬ್ಬಳು ಅಭ್ಯರ್ಥಿಯಾಗಿದ್ದು, ಕಾನೂನಿನ ಪ್ರಕಾರ ಮುಖಕ್ಕೆ ಮಾಸ್ಕ್ ಇಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಇದೆ. ಮುಸ್ಲಿಂ ಮಹಿಳೆಯರ ಬಳಿ ತಮ್ಮ ಬುರ್ಖಾವನ್ನು ತೆಗೆಯುವಂತೆ ಕೇಳುವುದು ದೊಡ್ಡ ವಿಷಯವಲ್ಲ, ಏಕೆಂದರೆ ನಾನು ಪರುಷ ಅಲ್ಲ, ತಾನೂ ಮಹಿಳೆಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.ಅದಲ್ಲದೆ ದಯವಿಟ್ಟು ನಾನು ಐಡಿ ಕಾರ್ಡ್‌ಗಳನ್ನು ನೋಡಿ ಮತ್ತು ಪರಿಶೀಲಿಸಬಹುದೇ ಎಂದು ತುಂಬಾ ವಿನಮ್ರತೆಯಿಂದ ಅವರಲ್ಲಿ ವಿನಂತಿಸಿದ್ದೇನೆ. ಆದರೆ ಯಾರಿಗಾದರೂ ಅದನ್ನು ದೊಡ್ಡ ಸಮಸ್ಯೆಯನ್ನು ಮಾಡಬೇಕು ಎಂದು ಬಯಸಿದರೆ, ಅವರಿಗೆ ಭಯವಿದೆ ಎಂದು ಅರ್ಥ ಎಂದು ಮಾಧವಿ ಲತಾ ತಿಳಿಸಿದ್ದಾರೆ. ಮಾಧವಿ ಲತಾ ವಿರುದ್ಧ ಮಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ