
ಕರ್ನೂಲ್: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಸ್ಲೀಪರ್ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಬಸ್ನಲ್ಲಿ ಬೆಂಕಿ ಆವರಿಸಿಕೊಂಡು 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.



















































