29.9 C
Udupi
Tuesday, July 14, 2026
spot_img
spot_img
HomeBlogಶಂಕರಾಚಾರ್ಯರ ಕುರಿತ ಹೇಳಿಕೆ ವಿವಾದ: ಹರಿಕಥೆ ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ಸ್ಪಷ್ಟನೆ

ಶಂಕರಾಚಾರ್ಯರ ಕುರಿತ ಹೇಳಿಕೆ ವಿವಾದ: ಹರಿಕಥೆ ಕಲಾವಿದೆಯ ಕ್ಷಮೆಯಾಚನೆ, ಶಿರೂರು ಮಠ ಸ್ಪಷ್ಟನೆ

ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. ಈ ವಿಚಾರಕ್ಕೆ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೋದಲ್ಲಿ ಮಾತನಾಡಿದ ಕಲಾವಿದೆ, ಯಾರನ್ನೂ ಅವಮಾನಿಸುವ ಉದ್ದೇಶ ಇರಲಿಲ್ಲ. ಯಾವುದೇ ಮಠದವರ ಸೂಚನೆಯಂತೆ ಮಾತನಾಡಿಲ್ಲ. ಪುಸ್ತಕದಲ್ಲಿದ್ದ ಮಾಹಿತಿಯನ್ನು ಉಲ್ಲೇಖಿಸಿದ್ದೇವೆ. ನಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಹೃತ್ಪೂರ್ವಕ ಕ್ಷಮೆ ಕೋರುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ಶಿರೂರು ಮಠವೂ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ರಾಜಾಂಗಣದಲ್ಲಿ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದೆ. ಭರತನಾಟ್ಯ ಕಾರ್ಯಕ್ರಮದ ಮಧ್ಯೆ ‘ಭಕ್ತ ಪ್ರಹ್ಲಾದ’ ಹರಿಕಥೆ ನಡೆದಿದ್ದು, ಅದರಲ್ಲಿ ಶಂಕರಾಚಾರ್ಯರ ಕುರಿತು ಅಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ ಎಂದು ಮಠ ಹೇಳಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಬ್ಬರು ಕಲಾವಿದೆಯರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಲಾಗಿದ್ದು, ಅವರು ಅದನ್ನು ಪಾಲಿಸಿದ್ದಾರೆ. ಈ ಅನಪೇಕ್ಷಿತ ಘಟನೆಯ ಬಗ್ಗೆ ಮಠ ವಿಷಾದ ವ್ಯಕ್ತಪಡಿಸಿದೆ.

ಏನಿದು ವಿವಾದ?

ಹರಿಕಥೆ ವೇಳೆ ಆಚಾರ್ಯ ಮಾಧ್ವರ ಪ್ರಸಂಗ ವಿವರಿಸುವ ಸಂದರ್ಭದಲ್ಲಿ ಜಗದ್ಗುರು ಆದಿ ಶಂಕರಾಚಾರ್ಯರನ್ನು ಏಕವಚನದಲ್ಲಿ ನಿಂದಿಸಿ ಅವಹೇಳನಕಾರಿಯಾಗಿ ಕಟ್ಟುಕಥೆ ಹೇಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದರ ವಿರುದ್ಧ ಶಂಕರ ಅನುಯಾಯಿಗಳು ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page