
ತಿರುಮಲ: ತಿರುಮಲದ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಶನಿವಾರ, ಭಾನುವಾರ ರಜೆ ಹಾಗೂ ಸೋಮವಾರ ಬಕ್ರೀದ್ ರಜೆ ಹಿನ್ನೆಲೆಯಲ್ಲಿ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದು ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು.
ಶನಿವಾರ ಹಾಗೂ ಆದಿತ್ಯವಾರ ಭಾರಿ ಜನದಟ್ಟಣೆ ಕಂಡುಬಂದಿದ್ದು ಇಂದು ಕೂಡ ಮುಂದುವರೆಯುವ ಸಾಧ್ಯತೆ ಇದೆ.