31.5 C
Udupi
Thursday, April 30, 2026
spot_img
spot_img
HomeBlogಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ ಆರಂಭದ ಹಿನ್ನೆಲೆ ಇಂದಿನಿಂದ ಡಿ.26 ರ ತನಕ ದರ್ಶನಕ್ಕೆ...

ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ ಆರಂಭದ ಹಿನ್ನೆಲೆ ಇಂದಿನಿಂದ ಡಿ.26 ರ ತನಕ ದರ್ಶನಕ್ಕೆ ಅವಕಾಶ

ತಿರುವನಂತಪುರಂ: ಇಂದು ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ ಪ್ರಾರಂಭಗೊಳ್ಳಲಿದ್ದು ಹೀಗಾಗಿ ಇಂದಿನಿಂದ ಡಿ.25 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ದರ್ಶನ ಅವಧಿಯನ್ನು 18 ಗಂಟೆಗೆ ವಿಸ್ತರಿಸಲಾಗಿದ್ದು, ಪ್ರತಿ ನಿತ್ಯ 70,000 ಜನರಿಗೆ ದರ್ಶನ ಅವಕಾಶ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಜೊತೆಗೆ ಜನಸಂದಣಿ ಹೆಚ್ಚಾದಲ್ಲಿ ಸಮಯವನ್ನು ಅರ್ಧಗಂಟೆ ವಿಸ್ತರಿಸುವಂತೆ ಚಿಂತಿಸಿದೆ. ಸುಮಾರು 60,000 ಜನರು ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಪಡೆಯಲಿದ್ದು ಇನ್ನೂ 10,000 ಜನರು ಸ್ಥಳದಲ್ಲೇ ಬುಕ್ಕಿಂಗ್ ಮಾಡಲು ಅನುಮತಿಸಲಾಗಿದೆ.

ಶಬರಿಮಲೆ ದೇವಸ್ಥಾನ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಈ ಕುರಿತು ಮಾತನಾಡಿ, ತೀರ್ಥೋದ್ಭವದ ಆರಂಭದಿಂದ ಪ್ರತಿದಿನ ಬೆಳಗ್ಗೆ 3 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ದರ್ಶನಕ್ಕೆ ನೀಡಲಾಗುವುದು. ಇದರಿಂದಾಗಿ ಭಕ್ತರ ನೂಕು-ನುಗ್ಗಲನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಸ್ಥಳದಲ್ಲಿಯೇ ಬುಕ್ಕಿಂಗ್ ಮಾಡಲು ಪಂಪಾ, ಎರುಮೇಲಿ ಮತ್ತು ವಂಡಿಪೆರಿಯಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹಲವಾರು ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಸ್ಪಾಟ್ ಬುಕಿಂಗ್ ಆಯ್ಕೆ ಮಾಡಿಕೊಳ್ಳುವ ಭಕ್ತರು ತಮ್ಮ ಗುರುತಿನ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ತೋರಿಸಬೇಕು.

ಭಕ್ತರಿಗೆ ಹೆಚ್ಚಿನ ಅನುಕೂಲತೆಗಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಬರಿಮಲೆಗೆ ಪ್ರಯಾಣಿಸುವವರಿಗೆ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡುತ್ತದೆ. ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಬುಕ್ ಮಾಡುವಾಗ ಭಕ್ತರು ಕೆಎಸ್‌ಆರ್‌ಟಿಸಿ ಟಿಕೆಟ್‌ಗಳನ್ನು ಖರೀದಿಸಲು ವಿಶೇಷ ಅವಕಾಶವನ್ನು ನೀಡಿದೆ. ಇದಲ್ಲದೆ, ಕನಿಷ್ಠ 40 ಜನರ ಗುಂಪು ಹೊಂದಿರುವವರು 10 ದಿನಗಳ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸುವ ಆಯ್ಕೆಯನ್ನು ಕೂಡ ನೀಡಲಾಗಿದೆ.

ಕೇರಳದ ಸಾರಿಗೆ ಸಚಿವ ಕೆಬಿ ಗಣೇಶ್ ಕುಮಾರ್ ಮಾತನಾಡಿ, 2024ರ ಮಂಡಲ ಮಕರವಿಳಕ್ಕು ಯಾತ್ರೆಯ ಮೊದಲ ಹಂತಕ್ಕೆ 383 ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಹಂತದಲ್ಲಿ ಹೆಚ್ಚುವರಿಯಾಗಿ 550 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೆಲವು ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page