
ಗೊರೂರು : ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಗೊರೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸಿದರು.
ಮಾನ್ಯ ಶಾಸಕರು ಮಾತನಾಡುತ್ತಾ, ಪದವಿಪೂರ್ವ ಕಾಲೇಜಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು, ಆದಷ್ಟು ತ್ವರಿತಗತಿಯಲ್ಲಿ ಗೊರೂರಿಗೆ ಸಂಬಂಧಪಟ್ಟ ಅಗತ್ಯ ಕಾರ್ಯಗಳನ್ನು ನೆರವೇರಿಸಿಕೊಡುವ ಬಗ್ಗೆ ಮಾತನಾಡಿದರು.ಗ್ರಾಮ ನೈರ್ಮಲ್ಯದ ಬಗ್ಗೆ ಹೆಚ್ಚಿನ ಒತ್ತು ಕೊಡುವಂತೆ, ಹಾಗೂ ಸ್ವಚ್ಛತೆಯ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಅನುಸರಿಸುವ ಬಗ್ಗೆ ಪಂಚಾಯತ್ ಸದಸ್ಯರುಗಳಲ್ಲಿ ಚರ್ಚೆ ಮಾಡಿದರು. ಕಾಲೇಜಿನ ಆಡಳಿತ ಮಂಡಳಿಯವರಲ್ಲಿ ಪ್ರಸ್ತುತ ಸನ್ನಿವೇಶದಲ್ಲಿ ಕಾಲೇಜಿನ ವಸ್ತುಸ್ಥಿತಿಯ ವಿಚಾರ ಮಂಥನ ನಡೆಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾರವರು,
ಗೊರೂರು ಪ್ರೌಢಶಾಲಾ ವಿಭಾಗದ ಹಿರಿಯ ಪದವೀಧರ ಶಿಕ್ಷಕರಾದ ಶ್ರೀ ರವೀಶ್ ರವರು,
ಗೊರೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ನಿಂಗರಾಜುರವರು, ಗುತ್ತಿಗೆದಾರರಾದ ಶ್ರೀ ನಿತಿನ್ ರವರು ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಹೇಮರಾಜುರವರು, ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಬಂಗಾರಿಗೌಡರು, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಶ್ರೀ ವೇದಮೂರ್ತಿಯವರು, ಗೊರೂರು ಗ್ರಾಮ ಪಂಚಾಯತಿ ಸದಸ್ಯರು, ಕಾಲೇಜಿನ ಉಪನ್ಯಾಸಕ ವರ್ಗದವರು, ಪ್ರೌಢಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿಯವರು, ಪೋಷಕರು ಹಾಗೂ ಗೊರೂರಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



















