
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿದಂತೆ 65 ಮಂದಿ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮೊದಲ ಕೇಸ್‌ನಲ್ಲಿ 28 ಮಂದಿ ಮತ್ತು 2ನೇ ಕೇಸ್‌ನಲ್ಲಿ 37 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಜುಲೈ 10ರಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ನ್ಯಾಯಾಧೀಶರ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.