ಅಬಾಕಸ್ ವಾರ್ಷಿಕ ಪರೀಕ್ಷೆಯಲ್ಲಿ, 9 ವಿದ್ಯಾರ್ಥಿಗಳು ಉತ್ತಮ ಸಾಧನೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 2024 25ರ ಸಾಲಿನ ಅಬಾಕಸ್ ವಾರ್ಷಿಕ ಪರೀಕ್ಷೆಯಲ್ಲಿ ನಮ್ಮ ಶಾಲೆಯ 9 ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿ ಅಂಕಗಳನ್ನು ಪಡೆದಿರುತ್ತಾರೆ ಶಾಲೆಯಲ್ಲಿ ಅಬಾಕಸ್ ತರಗತಿಯನ್ನು ಎರಡು ವರ್ಷಗಳಿಂದ ಉಚಿತವಾಗಿ ನೀಡುತ್ತಾ ಬಂದಿರುವ ನಿರ್ದೇಶಕರಾದ ಗುರುರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ ಅಲ್ಲದೆ 2024ರ ರಾಜ್ಯಮಟ್ಟದ ಅಬಾಕಸ್ ಪರೀಕ್ಷೆಯಲ್ಲಿ ಮೂರು ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದಿರುತ್ತಾರೆ ಮಕ್ಕಳಿಗೆ ಅಬಾಕಸ್ ಶಿಕ್ಷಕಿ ವಿಶಾಲಾಕ್ಷಿ ಇವರು ತರಬೇತಿಯನ್ನು ನೀಡಿರುತ್ತಾರೆ. ಪ್ರಶಸ್ತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೂ ಆಡಳಿತ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಸಂಚಾಲಕರು ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಅಭಿನಂದಿಸಿರುತ್ತಾರೆ.