2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

ಕಾರ್ಕಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 2024 25ರ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು.
ಈ ಕಾರ್ಯಕ್ರಮವನ್ನು ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಬಲೂನ್ ಹಾಗೂ ಗುಲಾಬಿ ಹೂವನ್ನು ಕೊಟ್ಟು ಸ್ವಾಗತಿಸಲಾಯಿತು. ನಂತರ ಎಲ್ಲ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಬ್ಯಾಂಡ್ ವಾದ್ಯದ ಮೂಲಕ ಕರೆತಂದು ಶೈಕ್ಷಣಿಕ ವರ್ಷದಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಮುಖ್ಯ ಶಿಕ್ಷಕರು ಮಾಹಿತಿ ನೀಡಿದರು ಶಿಕ್ಷಣ ಇಲಾಖೆಯಿಂದ ನೀಡಲಾದ ಉಚಿತ ಪಠ್ಯಪುಸ್ತಕವನ್ನು ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ವಿತರಿಸಲಾಯಿತು. ದಾನಿಗಳಿಂದ ಸಿಹಿ ಊಟದ ವ್ಯವಸ್ಥೆಯನ್ನು ಬಂದಂತಹ ಪೋಷಕರಿಗೆ ಮಕ್ಕಳಿಗೆ ಮಾಡಲಾಯಿತು ಹಿರಿಯ ಶಿಕ್ಷಕಿ ಶೋಭಾ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.