
ಶ್ರೀ ದುರ್ಗಾ ಅನುದಾನಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿ ಇಂದು ಅಂಬೇಡ್ಕರ್ ಜಯಂತಿಯ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಗೀತಾ ಭಂಡಾರಿಯವರು ವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಮುಖ್ಯ ಶಿಕ್ಷಕರಾದ ಜಗದೀಶ್ ಹೆಗ್ಡೆಯವರು ಅಂಬೇಡ್ಕರ್ ರವರ ಆದರ್ಶ ಜೀವನದ ಬಗ್ಗೆ ವಿವರಿಸಿ ದೇಶಕ್ಕೆ ಪವಿತ್ರ ಸಂವಿಧಾನ ಕೊಡುಗೆಯನ್ನು ನೀಡಿದ ಅಂಬೇಡ್ಕರ್ ಅವರನ್ನು ಸ್ಮರಿಸಿದರು. ವಿದ್ಯಾರ್ಥಿಗಳಾದ ಆದೀಶ್ ಹಾಗೂ ಶ್ರಾವಣಿ ಮಾತನಾಡಿದರು. ಎಲ್ಲಾ ಶಿಕ್ಷಕ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











