ಬೋರ್ಕಟ್ಟೆ ಗಂಗಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ, ವಿದ್ಯಾರ್ಥಿ ವೇತನ ವಿತರಣೆ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಕುಕ್ಕುಂದೂರು. ಇಲ್ಲಿ ಇಂದು ರಾಷ್ಟ್ರೀಯ ಪೋಷಣ ಅಭಿಯಾನದ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸರಕಾರದಿಂದ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ವಿತರಿಸುವ ಪೌಷ್ಟಿಕ ಆಹಾರಗಳನ್ನು ವಿದ್ಯಾರ್ಥಿಗಳು ನಿತ್ಯ ಸೇವಿಸಿ ಆರೋಗ್ಯ ವೃದ್ಧಿಸುವ ಸದುದ್ದೇಶದಿಂದ ಈ ಕಾರ್ಯಕ್ರಮ ವರ್ಷವೂ ನಡೆಯುತ್ತಿದೆ.

ಹೆಚ್ಚಿನ ತರಕಾರಿ ಸೊಪ್ಪು ಹಣ್ಣು ಹಾಲು ಗಳನ್ನು ನಿತ್ಯ ಆಹಾರ ಪದ್ಧತಿಯಲ್ಲಿ ಬಳಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಯಿತು. ಶಿಕ್ಷಕ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳು ಸೇರಿ ಆಹಾರ ಪದಾರ್ಥಗಳನ್ನು ಜೋಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕರು ಜಗದೀಶ್ ಹೆಗ್ಡೆ, ದುರ್ಗ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರು ಹಾಗೂ ದುರ್ಗಾ ಹೈಸ್ಕೂಲಿನ ನಿವೃತ್ತ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ, ಆರೋಗ್ಯ ಇಲಾಖೆಯ ಶಶಿಕಲಾ ಹಾಗೂ ಎಲ್ಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು. ಇಲ್ಲಿ ಇಂದು C.M ಪೋಷಣ್ ಅಭಿಯಾನ್ ಮಧ್ಯಾಹ್ನದ ಉಪಹಾರ ಯೋಜನೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು, ಇವರ ವತಿಯಿಂದ ನೀಡಲಾಗುವ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು.













