
ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ದಿಲನ್ ಜುಡೆ ಪಯಾಸ್ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 28.8. 2024 ರಂದು ಎಂ.ಜಿ.ಎಂ ಪದವಿ ಪೂರ್ವ ಕಾಲೇಜು, ಉಡುಪಿಯಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 100 ಮೀ. ಫ್ರೀಸ್ಟೈಲ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀ. ಫ್ರೀಸ್ಟೈಲ್ ನಲ್ಲಿ ಬೆಳ್ಳಿಯ ಪದಕಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.




















































































































