
ಕಾರ್ಕಳ :ಪೂರ್ವ ವಿದ್ಯಾರ್ಥಿಗಳು ಒಂದು ಶಿಕ್ಷಣ ಸಂಸ್ಥೆ ಹಾಗೂ ಸಮಾಜದ ಬೆನ್ನೆಲುಬು. ಶಿಕ್ಷಣ ಸಂಸ್ಥೆಯ ಪ್ರಗತಿ ಹಾಗೂ ಆರೋಗ್ಯಕರವಾದಂತಹ ಸಮಾಜ ನಿರ್ಮಾಣದಲ್ಲಿ ಇವರ ಪಾತ್ರ ಬಹಳ ಮುಖ್ಯ. ಹೀಗಾಗಿ ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ಅವಶ್ಯಕತೆ ಇದೆ. ಇದರಿಂದಾಗಿ ಒಂದು ಸಂಸ್ಥೆಯಲ್ಲಿ ನಡೆಯುವಂತಹ ಕಾರ್ಯ ಚಟುವಟಿಕೆಗಳಿಗೆ ಬಲ ಬರುತ್ತದೆ ಎಂದು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿನ ಪ್ರಾಂಶುಪಾಲರಾದಂತಹ ಡಾ. ಮಂಜುನಾಥ್ ಕೋಟ್ಯಾನ್ ಇವರು ಹೇಳಿದರು.

ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಕಾರ್ಕಳ ಇಲ್ಲಿ ನೂತನವಾಗಿ ಸ್ಥಾಪನೆಗೊಂಡ ಪೂರ್ವ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಇವರು ಮಾತನಾಡಿದರು. ಸಂಸ್ಥೆಯ ಸಂಚಾಲಕರಾದಂತಹ ಶ್ರೀಯುತ ಕೆ ವೆಂಕಟೇಶ್ ಪ್ರಭು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದಂತಹ ಪ್ರಮೀಳಾ ಕೋಟ್ಯಾನ್ ಇವರು ಸ್ವಾಗತಿಸಿದರು. ಶಿಕ್ಷಕಿ ಗೀತಾ ಶೆಟ್ಟಿಗಾರ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಆರತಿ ಆಚಾರ್, ಇವರು ಧನ್ಯವಾದವಿತ್ತರು. ಕಾರ್ಯಕ್ರಮದ ನಂತರ ಪೂರ್ವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಅಧ್ಯಕ್ಷರಾಗಿ ಕಾರ್ಕಳದ ಖ್ಯಾತ ವಕೀಲರಾದ ಎಂ ಕೆ ವಿಫುಲ್ ಕುಮಾರ್ ಉಪಾಧ್ಯಕ್ಷರಾಗಿ ಮಟ್ಟಿ ವೆಂಕಟೇಶ ಪ್ರಭು, ಕೋಶಾಧ್ಯಕ್ಷರಾಗಿ ಬೋಳ ಅವನಿ ಕಾಮತ್, ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಇವರು ನೇಮಕಗೊಂಡರು. ಕಾರ್ಯಕ್ರಮದಲ್ಲಿ ಪೂರ್ವ ವಿದ್ಯಾರ್ಥಿಗಳು ಸಂಸ್ಥೆಯ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.




















