31.3 C
Udupi
Saturday, March 21, 2026
spot_img
spot_img
HomeBlogಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ಕಾರ್ಕಳ

ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ಕಾರ್ಕಳ

ವೃತ್ತಿಪರ ಮಾರ್ಗದರ್ಶನ ಕಾರ್ಯಕ್ರಮ

ವಿದ್ಯಾರ್ಥಿಗಳು ಭವಿಷ್ಯದಲ್ಲಿ ಆಯ್ಕೆ ಮಾಡಬಹುದಾದ ವೃತ್ತಿ ಮಾರ್ಗಗಳ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ನೀಡುವ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಶ್ರೀ ಭುವನೇಂದ್ರ ಕಾಲೇಜು ಹಾಗೂ ಆಕಾಶ್ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ವೃತ್ತಿಪರ ಮಾರ್ಗದರ್ಶನ ಕಾರ್ಯಕ್ರಮವು ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ ಇಲ್ಲಿ ಯಶಸ್ವಿಯಾಗಿ ನೆರವೇರಿತು.

ಶ್ರೀ ಭುವನೇಂದ್ರ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ಸಂಧ್ಯಾ ಇವರು ತಮ್ಮ ಸಂಸ್ಥೆ ಸುಮಾರು 60 ದಶಕಗಳಿಂದ ಕಡಿಮೆ ಶುಲ್ಕದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣವನ್ನು ಯಾವ ರೀತಿ ನೀಡುತ್ತಿದ್ದೇವೆ ಹಾಗೂ ವಿವಿಧ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗೆ ಯಾವ ರೀತಿ ತರಬೇತಿ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ಜೊತೆಗೆ ಆಕಾಶ್‌ ಸಂಸ್ಥೆಯ ಸಹಾಯಕ ನಿರ್ದೇಶಕರಾದ ಡಾ. ಶ್ಯಾಮ್ ಪ್ರಸಾದ್ ಇವರು ಅಂತರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುವ ಸಿದ್ಧಾಂತಗಳ ಮೂಲಕ ಗುಣಮಟ್ಟದ ಶಿಕ್ಷಣವನ್ನು ಯಾವ ರೀತಿ ನಮ್ಮ ಸಂಸ್ಥೆ ನೀಡುತ್ತದೆ, ಸ್ಪರ್ಧಾತ್ಮಕ ಪರೀಕ್ಷೆ ತಯಾರಿ,ಮಾದರಿ ತಂತ್ರಗಳು, ಸಮಯ ನಿರ್ವಹಣೆ ಮುಂತಾದ ವಿಷಯದ ಕುರಿತಾಗಿ ಪೋಷಕರಿಗೆ ಮಾಹಿತಿಯನ್ನು ನೀಡಿದರು.


ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಇದರ ಪ್ರಾಂಶುಪಾಲರಾದ ಶ್ರೀಮತಿ ವೀಣಾ ಕಾಮತ್ ಇವರು ಎರಡನೇ ಅವಧಿಯ ಸಂಸ್ಥೆಯ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಸಂಚಾಲಕರಾದ ಶ್ರೀಯುತ ವೆಂಕಟೇಶ್ ಪ್ರಭು ಇವರು ಶುಭ ಹಾರೈಸಿದರು. ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ರಮೇಶ್ ಎಸ್.ಸಿ, ಪ್ರಾಧ್ಯಾಪಕರು ಹಾಗೂ ಆಕಾಶ್ ಸಂಸ್ಥೆಯ ಶೈಕ್ಷಣಿಕ ತರಬೇತುದಾರರು ಉಪಸ್ಥಿತರಿದ್ದರು. ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಜ್ಯೋತಿ ಹೆಗ್ಡೆ ಇವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page