
ಕಾರ್ಕಳ: ಡಿ.5 ರಂದು ಭುವನೇಂದ್ರ ವಸತಿ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ನಿಟ್ಟೆ ಬಯೋಟೆಕ್ನಾಲಜಿ ವಿಭಾಗದ ಪ್ರೋಫೆಸರ್ ಡಾ ವಿದ್ಯಾ ಎಸ್. ಎಂ ಅವರು ಮಕ್ಕಳ ಸರ್ವೋತೋಮುಖ ಬೆಳವಣಿಗೆ ಆಗಬೇಕಾದರೆ ಪಾಠದ ಜೊತೆಗೆ ಪತ್ಯೇತರ ಚಟುವಟಿಕೆಯ ಅಗತ್ಯ ಇದೆ, ಉನ್ನತ ಶಿಕ್ಷಣದಲ್ಲಿ ಪತ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದವರಿಗೆ ಹೆಚ್ಚಿನ ಪ್ರಾಶಸ್ತ್ರವಿದೆ. ಸ್ಪರ್ಧಾತ್ಮಕ ಬದುಕಿಗೆ ಸಿದ್ಧವಾಗಬೇಕಾದರೆ ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶ್ರೀ. ಕೆ ವೆಂಕಟೇಶ್ ಪ್ರಭು ಅವರು ವಹಿಸಿದ್ದರು. ಶಾಲಾ ಪ್ರಾಂಶುಪಾಲರಾದಂತಹ ಪ್ರಮೀಳಾ ಕೋಟ್ಯಾನ್ ಇವರು ಮುಖ್ಯ ಅತಿಥಿ, ಅಧ್ಯಕ್ಷರು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಅತ್ಮೀಯ ಸ್ವಾಗತವನ್ನು ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಕ್ರೀಡೆ ಹಾಗೂ ಪತ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಯಿತು.ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಪ್ರಣಾಮ್ ಕೋಟ್ಯಾನ್, ಪ್ರಣಮ್ಯ ಎಸ್. ಜಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು, ಶಾಲಾ ವಿದ್ಯಾರ್ಥಿ ನಾಯಕಿ ಅಂಕಿತ ಎಮ್. ಕೆ ವಂದಿಸಿದರು.



















