
ಕಾರ್ಕಳ: ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಇಲ್ಲಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಎಸ್.ವಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಕೆ.ಪಿ ಶೆಣೈ ರವರು ಉದ್ಘಾಟಿಸಿ ವಿದ್ಯಾರ್ಥಿನಿಯರಿಗೆ ಪ್ರಸಕ್ತ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸ ಉದ್ಯೋಗ ಪಡೆಯುವುದರ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನೇಮಿರಾಜ್ ಶೆಟ್ಟಿ ಮಾತನಾಡಿ, ಸಿಕ್ಕಿದ ಎಲ್ಲಾ ಅವಕಾಶಗಳನ್ನು ಉಪಯೋಗಿಸಿ ಮೌಲ್ಯಧಾರಿತ ಜೀವನ ರೂಪಿಸುವ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಪ್ರಾಂಶುಪಾಲರಾದ ಉಷಾ ನಾಯಕ್ ಸಭಾಧ್ಯಕ್ಷತೆ ವಹಿಸಿಕೊಂಡು ಜೀವನದ ಮೌಲ್ಯಗಳ ಬಗ್ಗೆ ವಿವರಿಸಿದರು.
ವಿದ್ಯಾರ್ಥಿ ಕ್ಷೇಮಾಧಿಕಾರಿ ಸೀತಾರಾಮ್ ನಾಯಕ್ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಸೌಜನ್ಯ, ಚೈತ್ರ, ಪವಿತ್ರ ಮತ್ತು ನವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೌಜನ್ಯ ಸ್ವಾಗತಿಸಿ, ಚೈತ್ರ ವಂದಿಸಿದರು ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.













