
ಕಾರ್ಕಳ : ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಎನ್.ಎಂ. ಎ.ಎಂ. ಐ. ಟಿ ನಿಟ್ಟೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಸುಸ್ಥಿರ ಅಭಿವೃದ್ಧಿ ಕುರಿತು ಆಕರ್ಷಕ ಕಾರ್ಯಾಗಾರವನ್ನು ನಡೆಸಿದರು.ವಿದ್ಯಾರ್ಥಿಗಳು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿಯ ಕುರಿತು ಹಾಗೂ ಸಂವಾದಾತ್ಮಕ ಕಾರ್ಯಗಾರದ ಮೂಲಕ ಸ್ಥಳೀಯ ಮತ್ತು ಜಾಗತಿಕ ಸುಸ್ಥಿರತೆಯ ಸವಾಲುಗಳಿಗೆ ನವೀನ ಪರಿಹಾರಗಳನ್ನು ಚರ್ಚಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ .ಕಾಮತ್, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.