
ಕಾರ್ಕಳ : ಶ್ರೀ ಶ್ರೀ ರವಿಶಂಕರ ಶಾಲೆಗಳು ದಿನಾಂಕ ಡಿಸೆಂಬರ್ 20 ರಿಂದ 23 ರವರೆಗೆ ಭಾರತದಾದ್ಯಂತ ಭಾಗವಹಿಸಿದ ಶಿಶಿರ ಉತ್ಸವದಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ ಕಾರ್ಕಳದ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸುಜನ್ಯಾ ಇವರು 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ತೃತೀಯ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಅನಿತಾ ಬಿ. ವಿ ತರಬೇತಿಯನ್ನು ನೀಡಿರುತ್ತಾರೆ. ಇವರನ್ನು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ ಕಾಮತ್, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಅಭಿನಂದಿಸಿ ಅವರು ಭವಿಷ್ಯದಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಿ ಯಶಸ್ಸನ್ನು ಗಲಿಸಲಿ ಎಂದು ಶುಭ ಹಾರೈಸಿದರು.




