
. ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದಿನಾಂಕ 14/11/2025 ರಂದು ಪಂಡಿತ್ ಜವಾಹರಲಾಲ್ ನೆಹರೂರವರ ಹುಟ್ಟುಹಬ್ಬದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಕ್ಕಳು ವಿವಿಧ ಮನೋರಂಜನ ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ವಿಶೇಷ ಆಕರ್ಷಣೆಯಾಗಿ ಶಿಕ್ಷಕಿಯರು ವಿವಿಧ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಿ, ಮಕ್ಕಳ ದಿನಾಚರಣೆಯನ್ನು ತುಂಬಾ ಅರ್ಥಪೂರ್ಣವಾಗಿ ಮಕ್ಕಳೊಂದಿಗೆ ಆಚರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





