
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ 01/11/2025ರಂದು ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಮೊದಲ್ಗೊಂಡು ಕನ್ನಡ ಮಾತೆಗೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಕನ್ನಡ ನಾಡಗೀತೆಗಳನ್ನು ಹಾಡಿದರು. ಕನ್ನಡ ಶಿಕ್ಷಕಿಯಾದ ನಳಿನಿ ಇವರು ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಯಿತು. ಇದರಿಂದ ವಿದ್ಯಾರ್ಥಿಗಳು ರಾಜ್ಯದ ಶ್ರೀಮಂತ ಪರಂಪರೆಯ ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳುವ ಸದವಕಾಶಗಳನ್ನು ಪಡೆದರು. ಕಾರ್ಯಕ್ರಮವನ್ನು 9ನೇ ತರಗತಿ ವಿದ್ಯಾರ್ಥಿ ತೇಜಸ್ ವಿ.ಶೇರಿಗಾರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಸೋನಲ್ ಆರ್ .ಕಾಮತ್, ಶಿಕ್ಷಕ ಶಿಕ್ಷಕರೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸಿತರಿದ್ದರು






















































