
ಹತ್ರಾಸ್: ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದ್ದು ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್ ಎಂಬ ಪೋಲೀಸ್ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ರಜನೀಶ್ ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಭಾಗವಾಗಿದ್ದು ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ, ಅಲ್ಲಿ ಬಿದ್ದಿದ್ದ ಹೆಣಗಳು ಮತ್ತು ಗೋಳಾಡುತ್ತಿದ್ದ ಸಾವಿರಾರು ಜನರನ್ನು ನೋಡಿ ಹೃದಯಾಘಾತಕ್ಕೊಳಗಾಗಿ ಅವರು ಮೃತಪಟ್ಟಿದ್ದಾರೆ. ಹತ್ರಾಸ್ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿಯವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.