
ಬೆಳಗಾವಿ/ಬೆಂಗಳೂರು: ಇಂದು ಬೆಳಗಾವಿಯಲ್ಲಿ ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಸಿ.ಟಿ ರವಿ ನಿಂದನೆ ಆರೋಪ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು ಎಂದು ಭಾವುಕರಾಗಿದ್ದಾರೆ.
ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಖಂಡಿಸಿ ಧರಣಿ ಮಾಡಿ ನಾವೆಲ್ಲ ಕೂತಿದ್ದ ವೇಳೆ ಸಭಾಪತಿಗಳು ಅಡ್ಜರ್ನ್ ಮಾಡಿದ್ದರು. ನಮ್ಮ ನಾಯಕ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಅಂತ 3-4 ಬಾರಿ ಹೇಳಿದರೂ ನಾನು ಸುಮ್ಮನೆ ಕುಳಿತಾಗ ಮತ್ತೆ ಹೇಳಿದರು. ಇದರಿಂದ ಸಿಟ್ಟಾಗಿ ನಾವು ಅವರ ಅಪಘಾತ ಪ್ರಕರಣ ಪ್ರಸ್ತಾಪಿಸಿದೆ. ಅದಕ್ಕೆ ಆ ಪದ ಉಪಯೋಗಿಸಿದ್ದಾರೆ. ಒಮ್ಮೆ ಅಲ್ಲ ಹತ್ತು ಬಾರಿ ಹೇಳಿದ್ದಾರೆ. ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ. ಡ್ರಗ್ ಅಡಿಕ್ಟ್ ಅಂದಿದ್ದಕ್ಕೆ ನೀವು ಆಕ್ಸಿಡೆಂಟ್ ಮಾಡಿ ಮೂವರ ಕೊಲೆಗಾರ ಎಂದಿದ್ದೆ. ಅದಕ್ಕೆ ಆ ರೀತಿ ಮಾತನಾಡಿದ್ದಾರೆ. ಸದನದಲ್ಲಿ ನ್ಯಾಯ ಸಿಗದ ಬಗ್ಗೆ ನಾನು ಏನೂ ಹೇಳಲ್ಲ. ನನ್ನ ಸೊಸೆ ನನ್ನ ಮಗ ನನಗೆ ಧೈರ್ಯ ತುಂಬಿದ್ದಾರೆ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.