
2024-25ನೇ ಸಾಲಿನ ರಾಷ್ಟ್ರೀಯ ಮತದಾರರ ದಿನ ಆಚರಣೆಯ (NVD) ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸ್ನೇಹ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿ ಶುಭ ಹಾರೈಸಿರುತ್ತಾರೆ.