
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿನಿತ್ಯ ಮೂರು ನಾಲ್ಕು ಸಾವು ಸಂಭವಿಸುತ್ತಿದೆ. ಆದರೆ ಸರಕಾರ ಇನ್ನೂ ಎಚ್ಚೆತ್ತಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ನೀಡಬೇಕು ಸರಕಾರ ಕೂಡಲೇ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಕೊರೋನಾ ರೀತಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ಮಾಡಬೇಕು. ಇದನ್ನೆಲ್ಲ ಬಿಟ್ಟು ಸರಕಾರ ಸಭೆ ಅಂತ ಸಮಯ ಕಳೆಯುತ್ತಿದೆ. ಪ್ರತಿ ಬಾರಿಯೂ ಸರಕಾರವನ್ನ ಎಚ್ಚರಿಸದೇ ಹೋದರೆ ಸರಕಾರ ಯಾವುದೇ ಕೆಲಸವನ್ನು ಮಾಡುತ್ತಿಲ್ಲ. ಆದ್ದರಿಂದ ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.