
ಧಾರವಾಡ: ರಾಜ್ಯ ಸರ್ಕಾರವು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ತನ್ನ ಆದೇಶಕ್ಕೆ ತಡೆ ನೀಡಿದ್ದ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು ಇದೀಗ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ.
ಏಕಸದಸ್ಯ ಪೀಠದಲ್ಲಿ ಅರ್ಜಿ ಇತ್ಯರ್ಥ ಆಗೋವರೆಗೂ ಸರ್ಕಾರದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ. ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶ ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಮತ್ತು ಇತರರು ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಹೋಗಿದ್ದರು. ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದ್ದು ಇದನ್ನ ಪ್ರಶ್ನೆ ಮಾಡಿ ದ್ವಿಸದಸ್ಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಮಂಗಳವಾರ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿ ಇಂದು ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಏಕಸದಸ್ಯ ಪೀಠದ ಆದೇಶ ಮುಂದುವರಿಕೆ ಮಾಡಿದೆ. ಏಕಸದಸ್ಯ ಪೀಠದಲ್ಲಿ ಅರ್ಜಿ ಇತ್ಯರ್ಥ ಆಗೋವರೆಗೂ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.





















































