
ದಿನಾಂಕ 13.6.20 27ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ನೂತನ ಮಂತ್ರಿಮಂಡಲದ ಪ್ರಮಾಣವಚನ ಕಾರ್ಯಕ್ರಮ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಾಧವ ಭಂಡಾರ್ಕರ್ ಇವರ ನೇತೃತ್ವದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಮ್ಮ ಸಂಸ್ಥೆಯ ಹಳೆ ವಿದ್ಯಾರ್ಥಿ ಶ್ರೀ ಶಂಕರ್ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ಎಂದರೇನು . ವಿದ್ಯಾರ್ಥಿ ದೆಸೆಯಲ್ಲಿ ಯಾವ ರೀತಿ ಜವಾಬ್ದಾರಿಯುತವಾಗಿ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗಬೇಕು ಎಂಬ ಬಗ್ಗೆ ತಿಳುವಳಿಕೆ ನೀಡಿದರು ಸಂಸ್ಥೆಯ ಹಿರಿಯ ಶಿಕ್ಷಕರಾದ ಶ್ರೀಮತಿ ಲ ವೀನ ಮೆಲ್ವಿಟಾ ನೊರೊನ್ಹಾ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ವಿವಿಧ ಸಂಘಗಳ ಸ್ಥಾಪನೆಯ ಉದ್ದೇಶ ತಿಳಿಸಿದರು ಹಾಗೂ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ವಿಜ್ಞಾನ ಶಿಕ್ಷಕರಾದ ಶ್ರೀಮತಿ ಅನಿತಾ ಸ್ವಾಗತಿಸಿ, ಶ್ರೀ ಪ್ರಕಾಶ್, ಗಣಿತ ಶಿಕ್ಷಕರು ವಂದನಾರ್ಪಣೆ ಮಾಡಿದರು ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀಮತಿ ವಿಮಲ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಎಸ್. ಡಿ.ಎಂ. ಸಿ. ಸದಸ್ಯರಾದ ಶ್ರೀ ಚಂದ್ರಶೇಖರ್, ಬೋಧಕ ವೃಂದದವರು ಉಪಸ್ಥಿತರಿದ್ದರು.

































