ಎರಡು ದಿನಗಳ ಕಾಲ ಅದ್ದೂರಿಯ ತಯಾರಿ

ಸಾಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ಪ್ರಸಕ್ತ ಸಾಲಿನ ತರಗತಿಗಳು ಶುಕ್ರವಾರ ಆರಂಭಗೊಳ್ಳಲಿದ್ದು ಇದರ ಪೂರ್ವಭಾವಿಯಾಗಿ ಎರಡು ದಿನಗಳ ಕಾಲ ಅದ್ದೂರಿಯ ತಯಾರಿ ನಡೆಸಲಾಗಿದೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ನಡೆಸಿದ ಸಾಧನೆ ಪರಿಣಾಮ ಈ ವರ್ಷ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಹೆಚ್ಚಳ ಕಂಡಿದೆ. ಎರಡು ದಿನಗಳ ಕಾಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಂದ ಸ್ವಚ್ಛತೆ ಕೊಠಡಿಗಳ ಅಲಂಕಾರ ಅಡುಗೆಗಳನ್ನು ಸ್ವಚ್ಛತೆ ಮುಂತಾದ ಕಾರ್ಯಕ್ರಮಗಳು ನಡೆದಿದೆ.