
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ ಸಮೀಕ್ಷೆ ಕೈಗೊಂಡಿದ್ದು ಆದರೆ ಇನ್ನೂ ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿವಹಿಸಲು ಸಾಧ್ಯವಾಗದೇ ಇರುವವರಿಗೆ ಆನ್ಲೈನ್ನಲ್ಲಿ ಸ್ವಯಂ ಘೋಷಣೆ ಸಲ್ಲಿಸುವ ಅವಧಿಯನ್ನು ನ.30ರವರೆಗೆ ವಿಸ್ತರಣೆ ಮಾಡಲಾಗಿದೆ.
ವಿವಿಧ ಕಾರಣಗಳಿಂದಾಗಿ ಕೆಲವರಿಗೆ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಂತವರಿಗೆ ಅವಕಾಶ ನೀಡುವ ಹಿನ್ನೆಲೆ ಆನ್ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು ಇದೇ ನ.10ರವರೆಗೆ ವಿಸ್ತರಿಸಲಾಗಿದ್ದು ಇದೀಗ ಮತ್ತೆ ನೀಡಲಾಗಿದ್ದ ಅವಧಿಯನ್ನು ವಿಸ್ತರಿಸಲಾಗಿದೆ.
ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್ಲೈನ್ ಲಿಂಕ್ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳಬಹುದು. ಸಮೀಕ್ಷೆಯಲ್ಲಿ ಇದುವರೆಗೂ ಪಾಲ್ಗೊಳ್ಳದೇ ಇರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.









