24.6 C
Udupi
Sunday, March 16, 2025
spot_img
spot_img
HomeBlogಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಲಘು ಉಪಹಾರ ಕೇಂದ್ರಗಳನ್ನು ತಪಾಸಣೆ ನಡೆಸಲು...

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಲಘು ಉಪಹಾರ ಕೇಂದ್ರಗಳನ್ನು ತಪಾಸಣೆ ನಡೆಸಲು ಸೂಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಫುಡ್ ಪಾಯಿಸನ್, ಕಲುಷಿತ ನೀರು ಸೇವನೆಯಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರವು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಲಘು ಉಪಹಾರ ಕೇಂದ್ರಗಳನ್ನು ತಪಾಸಣೆ ನಡೆಸಲು ನಿರ್ಧರಿಸಿದೆ.

ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದೆ, ಕಲುಷಿತ, ವಿಷಾಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳನ್ನು ಉಪಯೋಗಿಸುತ್ತಿರುವ ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮಕ್ಕೆ ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act – 2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page