ಬಿಜೆಪಿ ಟೀಕೆಗೆ, ಸಿಎಂ ತಿರುಗೇಟು

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ, ಗ್ಯಾರಂಟಿ ಯೋಜನೆಗಳು ರಾಜ್ಯದ ಬಡಜನರ ಪರವಾಗಿ ಕೆಲಸ ಮಾಡಿದೆ. ಮೋದಿಯವರ ಅಚ್ಚೆ ದಿನ್ ಇಂದಿಗೂ ಬರಲೇ ಇಲ್ಲ. ಅವರ ಆಳ್ವಿಕೆಯಲ್ಲಿ, ರೂಪಾಯಿ ಮೌಲ್ಯ ಕುಸಿತದ ಬಗ್ಗೆ ರಾಜ್ಯ ಬಿಜೆಪಿ ಮಾತನಾಡುತ್ತಿಲ್ಲ. ರಾಜ್ಯ ಬಿಜೆಪಿ ನಾಯಕರು ಮೋದಿ ಮುಂದೆ ನಿಲ್ಲಲು ಹೆದರುತ್ತಾರೆ. ನಮ್ಮ ಸರಕಾರದ ಬಗ್ಗೆ ಟೀಕೆ ಮಾಡುತ್ತಾರೆ ನಾನು ಸಾಲ ರಾಮಯ್ಯ ಅಲ್ಲ ಅನ್ನದ ರಾಮಯ್ಯ ಎಂದು ಸಿಎಂ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರ ರೋಡ್ ಶೋ ನಡೆಸಿ ಸಿಎಂ ಮಾತನಾಡಿದರು. ನಮ್ಮ ಪಕ್ಷ ಎಲ್ಲಾ ವರ್ಗದ ಜನರ ಜೊತೆ ನಿಲ್ಲುತ್ತದೆ. ಅನ್ಯ ರಾಜ್ಯಗಳ ಬೆಲೆ ಏರಿಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಗಣನೀಯವಾಗಿ ಬೆಲೆಗಳು ಕಡಿಮೆ. ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ. ಬಂಡವಾಳ ಹುಡುಗಿಯಲ್ಲೂ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೂ ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.









