
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪದಡಿ ಸಿಎಂ ಸಿದ್ದರಾಮಯ್ಯಗೆ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಕಾನೂನು ಹೋರಾಟ ಮಾಡುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಬಿರುಸಿನ ವಾದ ಪ್ರತಿವಾದಗಳು ನಡೆಯುತ್ತಿದ್ದು ಈಗಾಗಲೇ 3 ಬಾರಿ ವಿಚಾರಣೆ ಮುಂದೂಡಿಕೆಯಾಗಿದ್ದು ಇಂದು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುಂದುವರಿಯಲಿದೆ.
ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಕಾರ್ಯದರ್ಶಿ ಪರ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ವಾದ ಮಂಡಿಸಲಿದ್ದು ಆಗಸ್ಟ್ 31ರಂದು ನಡೆದಿದ್ದ ವಿಚಾರಣೆಯಲ್ಲಿ ಎರಡು ಕಡೆಯ ವಕೀಲರು ಹಲವು ಅಂಶಗಳನ್ನು ಮುಂದಿಟ್ಟು ವಾದ ಪ್ರತಿವಾದ ನಡೆಸಿದ್ದರು.
ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11ಗಂಟೆಗೆ ಮೈಸೂರು ಪ್ರವಾಸ ನಿಗದಿಯಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸುವ ಯೋಜನೆ ಇತ್ತು. ಆದರೆ ಹೈಕೋರ್ಟ್‌ನಲ್ಲಿಂದು ವಿಚಾರಣೆ ಕಾರಣ, ಪ್ರವಾಸ ರದ್ದು ಮಾಡಿದ್ದಾರೆ. ಮನೆಯಲ್ಲೇ ವಾದ, ಪ್ರತಿವಾದ ಆಲಿಸಿ, ಇಂದು ಸಂಜೆ ಮೈಸೂರು ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.













