
ಬೆಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಅದಲ್ಲದೆ ಎಸ್‌ಐಟಿ ಕೂಡ ಪತ್ರದ ಮೂಲಕ ಕೋರಿದ್ದರೂ ಕೇಂದ್ರ ಸರ್ಕಾರ ಅದಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಕ್ರಿಯೆ ನಡೆಸದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ಪ್ರಜ್ವಲ್ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಅವರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದರು.