
ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದು ಈ ವೇಳೆ ಎಲ್ಲರೂ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದು ಸಿಎಂ ಸಮ್ಮುಖದಲ್ಲಿಯೇ ಹೇಳಿದ್ದಾರೆ.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದು ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದರು