
ನವದೆಹಲಿ: ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಗಳು ಆರಂಭಗೊಂಡಿದ್ದು, ಮೊದಲ ಹಂತದ ಪರೀಕ್ಷೆಯಲ್ಲಿ ಬರೆಯಲಾಗದ ವಿದ್ಯಾರ್ಥಿಗಳಿಗೆ ಎರಡನೇ ಆವೃತ್ತಿಯ ಪರೀಕ್ಷೆಗೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಹಲವರು ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿಗಳು 2 ಪರೀಕ್ಷೆಗಳ ಪೈಕಿ ಮೊದಲನೇ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳ ಪರೀಕ್ಷೆ ಬರೆಯದವರಿಗೆ ಎರಡನೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಿಲ್ಲ ಎಂದು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ತಿಳಿಸಿದೆ.
ಮೊದಲನೇ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳು ವಿಜ್ಞಾನ, ಗಣಿತ, ಸಮಾಜವಿಜ್ಞಾನ, ಹಾಗೂ ಭಾಷೆಗಳ ಪೈಕಿ ಮೂರು ವಿಷಯಗಳಲ್ಲಿ ತಮ್ಮ ಅಂಕಗಳನ್ನು ಸುಧಾರಿಸಲೆಂದು ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆ.
ಒಂದು ವೇಳೆ ಮೊದಲ ಪರೀಕ್ಷೆಯಲ್ಲಿ ಕನಿಷ್ಠ ಮೂರು ವಿಷಯಗಳ ಪರೀಕ್ಷೆ ಬರೆಯದೆ ಇದ್ದರೆ ,ಅಂತಹ ವಿದ್ಯಾರ್ಥಿಗಳು ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಮೇನ್ ಪರೀಕ್ಷೆಗೆ ಕುಳಿತು ಉತ್ತೀರ್ಣರಾಗಬೇಕಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.




