31.4 C
Udupi
Saturday, April 18, 2026
spot_img
spot_img
HomeBlogಸಿಬಿಎಸ್‌ಸಿ 10ನೇ ತರಗತಿ ಪರೀಕ್ಷೆಯಲ್ಲಿ, ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಸಾಧನೆ

ಸಿಬಿಎಸ್‌ಸಿ 10ನೇ ತರಗತಿ ಪರೀಕ್ಷೆಯಲ್ಲಿ, ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಸಾಧನೆ

ಕಾರ್ಕಳ: ಪ್ರಸಕ್ತ ಶೈಕ್ಷಣಿಕ ವರ್ಷ 2025–26ರ ಸಿಬಿಎಸ್ಸಿ ಹತ್ತನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ ಶಾಲೆಯು ನಿರಂತರವಾಗಿ 100% ಫಲಿತಾಂಶವನ್ನು ಈ ವರ್ಷವೂ ಗಳಿಸುವುದರೊಂದಿಗೆ ಕಳೆದ ಹಲವಾರು ವರ್ಷಗಳಿಂದ ಗಳಿಸಿಕೊಂಡು ಬಂದ ಶೈಕ್ಷಣಿಕ ಸಾಧನೆಯನ್ನು ಈ ವರ್ಷವೂ ಸಾಧಿಸಿದೆ. ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.(ಐಚ್ಚಿಕ ವಿಷಯಗಳನ್ನು ಹೊರತುಪಡಿಸಿ)
ಇದಲ್ಲದೆ 8 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ಇಬ್ಬರು ವಿದ್ಯಾರ್ಥಿಗಳು ಸಂಸ್ಕೃತ ವಿಷಯದಲ್ಲಿ ನೂರು (100/100) ಅಂಕಗಳನ್ನು ಗಳಿಸಿದ್ದಾರೆ. ಈ ಪ್ರಸಕ್ತ ವರ್ಷದಲ್ಲಿ 92.6% ಅಂಕವನ್ನು ಗಳಿಸಿದ ವಿದ್ಯಾರ್ಥಿನಿಯು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ.


ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ, ಪೋಷಕರ ನಿರಂತರ ಬೆಂಬಲ ಹಾಗೂ ವಿದ್ಯಾರ್ಥಿಗಳ ಪ್ರಾಮಾಣಿಕ ಪರಿಶ್ರಮ ಕಾರಣವಾಗಿದೆ.
ಈ ಸಾಧನೆಯನ್ನು ಮಾಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page