
ಮಂಗಳೂರು: ಎನ್‌ಐಎ ಯು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಜಪೆ ಹಾಗೂ ಸುರತ್ಕಲ್‌ನಲ್ಲಿ ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆ ಸೇರಿದಂತೆ ಒಟ್ಟು 14 ಕಡೆ ದಾಳಿ ನಡೆಸಿದೆ.
ಮೇ 1 ರಂದು ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದು ಹೀಗಾಗಿ ಕೇಂದ್ರ ಗೃಹ ಇಲಾಖೆ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿತ್ತು. ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ.