33 C
Udupi
Wednesday, April 22, 2026
spot_img
spot_img
HomeBlogಸೆಪ್ಟೆಂಬರ್ 1ಕ್ಕೆ ಸಿಇಟಿ, ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಕೆಇಎ

ಸೆಪ್ಟೆಂಬರ್ 1ಕ್ಕೆ ಸಿಇಟಿ, ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಕೆಇಎ

ಬೆಂಗಳೂರು: ಮಂಗಳವಾರ ರಾತ್ರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ ಗಳನ್ನು ದಾಖಲಿಸಲು ತನ್ನ ವೆಬ್‌ಸೈಟ್‌ನಲ್ಲಿ ಪೋರ್ಟಲ್ ತೆರೆದಿದೆ.

ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪ್ರತಿಕ್ರಿಯಿಸಿ ಆಗಸ್ಟ್ 22ರ ಬೆಳಿಗ್ಗೆ 10ರವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ‌ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸಪ್‌ ಸಂದೇಶ ಕೂಡ ರವಾನಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೂ ಆಪ್ಷನ್ ಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ವಿವರಿಸಿದ್ದಾರೆ. ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ. ನಂತರ ಆಗಸ್ಟ್ 27ರ ಬೆಳಗ್ಗೆ 11ರವರೆಗೆ ಇಚ್ಛೆಗಳನ್ನು ಬದಲಿಸಿಕೊಳ್ಳಬಹುದು. ಸೆಪ್ಟೆಂಬರ್ 1ರಂದು ಸಂಜೆ 6ಕ್ಕೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ/ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಹಾಗೆಯೇ ಕಾಲೇಜು ಶುಲ್ಕದ ಮಾಹಿತಿ ಕೂಡ ಇದ್ದು, ಅದನ್ನೂ ಗಮನಿಸಿಯೇ‌ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಿ ಎಂದೂ ಪ್ರಸನ್ನ ಸಲಹೆ ನೀಡಿದ್ದಾರೆ. ಆಪ್ಷನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಂಡೇ ಮುಂದಡಿ ಇಡಬೇಕು ಎಂದು ಅವರು ಸೂಚಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page