
ಬೆಂಗಳೂರು: ಸೆ.22ರಂದು ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿಕೆ ಮಾಡಲಾಗಿದ್ದು ಇದೀಗ ಮತ್ತೆ ಅ.3ರಂದು ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 28ರಂದು ಯುಪಿಎಸ್‌ಸಿ ಇಂಗ್ಲೀಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಕೆಇಎ ಅವರು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.













