26.2 C
Udupi
Saturday, July 18, 2026
spot_img
spot_img
HomeBlogಸೋನಮ್ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ದಾಖಲಿಸಿದ ದೆಹಲಿ ಪೊಲೀಸರು

ಸೋನಮ್ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಜೂನ್ 28ರಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಶನಿವಾರ ಬೆಳಿಗ್ಗೆ ದೆಹಲಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸುಮಾರು 20 ದಿನಗಳಿಂದ ಉಪವಾಸದಲ್ಲಿದ್ದ ವಾಂಗ್ಚುಕ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಕಾರಣ, ದೆಹಲಿ ಹೈಕೋರ್ಟ್ ನಿರ್ದೇಶನ ಹಾಗೂ ವೈದ್ಯರ ಸಲಹೆಯಂತೆ ಅವರನ್ನು ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಾಗೂ ಕಾರ್ಯಕರ್ತರ ಘೋಷಣೆಗಳ ನಡುವೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಂಗ್ಚುಕ್ ಅವರನ್ನು ಸ್ಥಳಾಂತರಿಸಿದರು. ಈ ವೇಳೆ ಕೆಲ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.ಆದರೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾರ್ಯಾಚರಣೆ ನಡೆಸಿ, ವಾಂಗ್ಚುಕ್ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page