
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನಿರುದ್ಯೋಗಿ ಯುವಕರ ನಡೆ ಕುರಿತು ತೀಕ್ಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ಎಲ್ಲರ ಮೇಲೂ ಟೀಕೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಹಿರಿಯ ವಕೀಲರ ನೇಮಕಾತಿ ಸಂಬಂಧದ ಅರ್ಜಿಯ ವಿಚಾರಣೆ ನಡೆಸುವ ವೇಳೆ ಸಿಜೆಐ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಮಾತುಗಳನ್ನು ಹೇಳಿದೆ. ಹಿರಿಯ ವಕೀಲ ಹುದ್ದೆಗಾಗಿ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸಿದ್ದ ಅರ್ಜಿದಾರರ ವಕೀಲರ ನಡೆಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು.
“ದೇಶದಲ್ಲಿ ಜಿರಳೆಗಳಂತೆ ಯುವಕರಿದ್ದು ಅವರಲ್ಲಿ ಬಹುತೇಕರು ನಿರುದ್ಯೋಗಿಗಳು. ಅವರಿಗೆ ಇಂಥದ್ದೇ ಅಂತ ಒಂದು ವೃತ್ತಿ ಇರುವುದಿಲ್ಲ. ಅವರಲ್ಲಿ ಕೆಲವರು ಮಾಧ್ಯಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ, ಸಾಮಾಜಿಕ ಮಾಧ್ಯಮ, ಆರ್‌ಟಿಐ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ಇತರರ ವಿರುದ್ಧ ನಿರಂತರ ದಾಳಿ ನಡೆಸುತ್ತಿದ್ದಾರೆ” ಎಂದು ಸಿಜೆಐ ಸೂರ್ಯಕಾಂತ್ ವಾಗ್ದಾಳಿ ನಡೆಸಿದ್ದಾರೆ.






















































































