ಭಾಷಣ ಸ್ಪರ್ಧೆಯಲ್ಲಿ ಬ್ರೋವಿನ್ ಅಗೇರಾ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಜಿಲ್ಲಾ ಪಂಚಾಯತ್ ಉಡುಪಿ, ಉಪ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ,ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಇದರ ಸಹಯೋಗದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ನಮ್ಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಬ್ರೊವಿನ್ ಅಗೇರಾ ಇವನು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಇವನಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವರ್ಗದವರು, ಸಿಬ್ಬಂದಿವರ್ಗ,ಹಾಗೂ ಪೋಷಕರು ಅಭಿನಂದಿಸಿ,ಶುಭ ಕೋರಿರುತ್ತಾರೆ.



















