
ಜೀವದ ಹಂಗು ತೊರೆದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸರ ಜನ್ಮದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಎಂಟನೇ ತರಗತಿಯ ಪ್ರೇಕ್ಷಾ ಬೋಸರ ಜೀವನದ ವಿಚಾರಧಾರೆಯನ್ನು ವಿವರಿಸಿದರು. ನಂತರ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಮುಖ್ಯೋಪಾಧ್ಯಾಯಿನಿ ಸುರೇಖಾ ರಾಜ್ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶ್ರೀಮತಿ ರಾಜಶ್ರೀ ಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.



















